ADVERTISEMENT

ಸಿಇಟಿ ಮೂಲಕ ಸೀಟು ಹಂಚಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 20:00 IST
Last Updated 18 ಡಿಸೆಂಬರ್ 2013, 20:00 IST

ಬೆಂಗಳೂರು: ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಯನ್ನು ಅನು­ಷ್ಠಾನಕ್ಕೆ ತರದೆ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಮೂಲಕವೇ ವೃತ್ತಿ ಶಿಕ್ಷಣ ಕೋರ್ಸ್‌ಗಳ ಸೀಟು ಹಂಚಿಕೆ ಮಾಡಲು ಒತ್ತಾಯಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಎಬಿವಿಪಿ, ಎಸ್ಎಫ್ಐ  ಸಂಘಟನೆಯ ಸದಸ್ಯರು ಹಾಗೂ ವಿದ್ಯಾರ್ಥಿಗಳು, ಕಾಯ್ದೆ­ಯನ್ನು ಅನು­ಷ್ಠಾನಕ್ಕೆ ತರಬಾರದೆಂದು ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಡಿ.21ರಂದು ಬಂದ್‌ಗೆ ಕರೆ: ಸಿಇಟಿ ಮೂಲಕವೇ ವೃತ್ತಿಶಿಕ್ಷಣ ಕೋರ್ಸ್‌ಗಳ ಸೀಟು ಹಂಚಿಕೆ ಮಾಡಲು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ), ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಿರುವ ಕಾಯ್ದೆಯನ್ನು ವಿರೋಧಿಸಿ ಡಿ.21 ರಾಜ್ಯದಾದ್ಯಂತ ಪದವಿ ಪೂರ್ವ ಕಾಲೇಜುಗಳ ಬಂದ್‌ಗೆ ಕರೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.