ADVERTISEMENT

ಸಿ.ಎಂ ಜನತಾ ದರ್ಶನ ಇಂದು

​ಪ್ರಜಾವಾಣಿ ವಾರ್ತೆ
Published 28 ಮೇ 2018, 20:08 IST
Last Updated 28 ಮೇ 2018, 20:08 IST
ಸಿ.ಎಂ ಜನತಾ ದರ್ಶನ ಇಂದು
ಸಿ.ಎಂ ಜನತಾ ದರ್ಶನ ಇಂದು   

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.

ಬೆಳಿಗ್ಗೆ 10ಕ್ಕೆ ಆರಂಭವಾಗುವ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕುಮಾರಸ್ವಾಮಿ 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಭಾರಿ ಜನಪ್ರಿಯತೆ ಪಡೆದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.