ADVERTISEMENT

ಸಿ.ಎಂ ವಿರುದ್ಧ ಎಸಿಬಿಗೆ ದೂರು

​ಪ್ರಜಾವಾಣಿ ವಾರ್ತೆ
Published 8 ಮೇ 2018, 19:41 IST
Last Updated 8 ಮೇ 2018, 19:41 IST
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಸಂಗ್ರಹ ಚಿತ್ರ)   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಹಿಂದಿನ ಅಬಕಾರಿ ಸಚಿವ ಎಚ್‌. ವೈ. ಮೇಟಿ ತಮ್ಮ ಆಪ್ತನೊಬ್ಬನ ಮೂಲಕ ‘ವರ್ಗಾವಣೆ ವ್ಯವಹಾರ’ ನಡೆಸಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ಕೊಡಲಾಗಿದೆ.

ಮುಖ್ಯಮಂತ್ರಿ ಪುತ್ರ ಡಾ. ಯತೀಂದ್ರ ಹಾಗೂ ಜಾರ್ಜ್‌ ಪುತ್ರ ರಾಣಾ, ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ಹಾಗೂ ವರ್ಗಾವಣೆ ಮಾಡಿಸಿಕೊಂಡಿದ್ದಾರೆನ್ನಲಾದ ಅಬಕಾರಿ ಇಲಾಖೆಯ ಕೆಲವು ಅಧಿಕಾರಿಗಳ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಿಬಿಎಂಪಿ ಬಿಜೆಪಿ ನಾಯಕ ಎನ್‌.ಆರ್‌. ರಮೇಶ್‌ ಈ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಹಾಗೂ ಜಾರ್ಜ್‌ ಆಪ್ತ ಎಂದು ಹೇಳಿಕೊಂಡು, ವರ್ಗಾವಣೆ ವ್ಯವಹಾರದ ಬಗ್ಗೆ ಕೆಲವರೊಂದಿಗೆ ಚರ್ಚಿಸುವ ಪಶು ಸಂಗೋಪನಾ ಇಲಾಖೆ ನೌಕರ ಜೆ. ಮಂಜುನಾಥ ಅವರಿಗೆ ಸಂಬಂಧಿಸಿದ್ದು ಎನ್ನಲಾದ ದೂರವಾಣಿ ಸಂಭಾಷಣೆಯನ್ನು ದೂರಿನ ಜೊತೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.