
ಪ್ರಜಾವಾಣಿ ವಾರ್ತೆಬೆಂಗಳೂರು: ರಾಜ್ಯದ ಎಲ್ಲ ನಗರ ಪಾಲಿಕೆಗಳು, ನಗರಸಭೆಗಳು ಮತ್ತು ಪುರಸಭೆಗಳ ಲೆಕ್ಕಪತ್ರ ಕುರಿತು ಮಹಾಲೇಖಪಾಲರಿಂದ (ಸಿಎಜಿ) ಪರಿಶೀಲನೆ ನಡೆಸಲು ಅವಕಾಶ ಕಲ್ಪಿಸಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಈ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ ಮತ್ತು ಕರ್ನಾಟಕ ಪೌರಾಡಳಿತ ಕಾಯ್ದೆಗಳಿಗೆ ತಿದ್ದುಪಡಿ ಅಂಗೀಕರಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.