ADVERTISEMENT

ಸಿಕೆಪಿ ಆಡಳಿತ ಮಂಡಳಿ: ಫಲಿತಾಂಶ ಪ್ರಕಟಣೆಗೆ ತಡೆ

ಚಿತ್ರಕಲಾ ಪರಿಷತ್‌ಗೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 20:36 IST
Last Updated 14 ಜೂನ್ 2019, 20:36 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಇದೇ 16ರಂದು ಚಿತ್ರಕಲಾ ಪರಿಷತ್ (ಸಿಕೆಪಿ) ಆಡಳಿತ ಮಂಡಳಿಗೆ ನಡೆಯಲಿರುವ ಚುನಾವಣೆ ಫಲಿತಾಂಶವನ್ನು ಮುಂದಿನ ವಿಚಾರಣೆವರೆಗೂ ಪ್ರಕಟಿಸಬಾರದು’ ಎಂದು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಪಿ.ರಾಜಶೇಖರ ಮತ್ತು ವಿ.ಕೃಷ್ಣಾರೆಡ್ಡಿ ಸಲ್ಲಿಸಿರುವ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಆಕ್ಷೇಪ: ‘ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಕೆಲವರು ಸಿಕೆಪಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು, ಈ ಸಂಬಂಧ ಕ್ರಿಮಿನಲ್‌ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ರಿಜಿಸ್ಟ್ರಾರ್‌ ಅವರಿಗೆ ದೂರು ನೀಡಲಾಗಿದೆ. ಆದರೆ, ಇನ್ನೂ ಯಾವುದೇ ಕ್ರಮ ಜರುಗಿಲ್ಲ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ADVERTISEMENT

ಆಡಳಿತ ಮಂಡಳಿಗೆ ಆಡಳಿತಾಧಿಕಾರಿ ನೇಮಕ ಮಾಡುವಂತೆಯೂ ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ಶ್ರೀಕಾಂತ ಪಾರ್ಥಸಾರಥಿ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.