ADVERTISEMENT

ಸಿದ್ದರಾಮಯ್ಯ ಅವರ 65ನೇ ಹುಟ್ಟುಹಬ್ಬ: ಅಂಬೇಡ್ಕರ್ ಮೈದಾನದಲ್ಲಿ ಛಾಯಾಚಿತ್ರ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2012, 19:30 IST
Last Updated 10 ಆಗಸ್ಟ್ 2012, 19:30 IST

ಬೆಂಗಳೂರು:  `ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 65ನೇ ಹುಟ್ಟುಹಬ್ಬದ ಆಚರಣೆಯನ್ನು ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಹಲಸೂರಿನ ಡಾ. ಬಿ.ಆರ್. ಅಂಬೇಡ್ಕರ್ ಆಟದ ಮೈದಾನ ಮರ್ಫಿಟೌನಲ್ಲಿ ಆಯೋಜಿಸಿದೆ~ ಎಂದು ಪಿ. ರಮೇಶ್ ವೆಲ್‌ಫೇರ್ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಪಿ.ರಮೇಶ್ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಹುಟ್ಟು ಹಬ್ಬದ ಅಂಗವಾಗಿ ಸಿದ್ದರಾಮಯ್ಯ ಅವರ  ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ.

ಟ್ರಸ್ಟ್ ವತಿಯಿಂದ ಸುಮಾರು 15 ಸಾವಿರ ಬಡವರಿಗೆ ಸೀರೆ, ಕಂಬಳಿ, ಪಂಚೆ, ಟವಲ್‌ಗಳನ್ನು ವಿತರಿಸಲಾಗುವುದು. ಕಾರ್ಯಕ್ರಮಕ್ಕೆ ಸರ್.ಸಿ.ರಾಮನ್ ನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇದಕ್ಕೆ ಕೈ ಜೊಡಿಸಿದ್ದಾರೆ~ಎಂದರುಕಾರ್ಯಕ್ರಮಕ್ಕೆ ಕೇಂದ್ರದ ಮಾಜಿ ಸಚಿವ ಜಾಫರ್ ಶರೀಫ್, ಶಾಸಕರಾದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಂ ವೀರಭದ್ರಪ್ಪ, ಸಾಹಿತಿ ಎಲ್. ಹನುಮಂತಯ್ಯ ಮತ್ತಿತರರು ಆಗಮಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಿ.ರಮೇಶ್ ವೆಲ್‌ಫೇರ್ ಚಾರಿಟಬಲ್ ಟ್ರಸ್ಟ್‌ನ ಸದಸ್ಯರಾದ ಮುರುಗನ್, ವಿ.ಕೆ.ಕೃಷ್ಣನ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.