ADVERTISEMENT

ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆಗೆ ₹20 ಕೋಟಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2017, 19:34 IST
Last Updated 29 ಅಕ್ಟೋಬರ್ 2017, 19:34 IST
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಬೆಂಗಳೂರು: ‘ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ನಗರದ 198 ವಾರ್ಡ್‌ಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲು ಪೊಲೀಸ್‌ ಇಲಾಖೆಗೆ ₹20 ಕೋಟಿ ಮಂಜೂರು ಮಾಡಲಾಗಿದೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಜಯನಗರ ಬಳಿಯ ಗುರಪ್ಪನಪಾಳ್ಳ ವಾರ್ಡ್‌ನಲ್ಲಿ ಹೊಸದಾಗಿ ತೆರೆಯಲಾದ ಪೊಲೀಸ್‌ ಹೊರ ಠಾಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಸದ್ಯ ನಗರದ ಪೊಲೀಸರ ಅಧೀನದಲ್ಲಿ 352 ಹಾಗೂ ಖಾಸಗಿಯವರ ಒಡೆತನದಲ್ಲಿ 5 ಲಕ್ಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿವೆ. ವಾರ್ಡ್‌ನಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ’ ಎಂದರು.

ADVERTISEMENT

‘ನಗರದಲ್ಲಿ ಬಾರ್‌, ಕ್ಲಬ್‌ ಹಾಗೂ ಮೀಟರ್‌ ಬಡ್ಡಿ ಮಾಫಿಯಾದ ಅಕ್ರಮದ ಬಗ್ಗೆ ದೂರುಗಳು ಬಂದಿವೆ. ಅವುಗಳನ್ನು ಮಟ್ಟಹಾಕಲು 25 ಅಂಶಗಳ ಸಲಹೆಯನ್ನು ಪಾಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.