ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 7ರ ಸಾದಹಳ್ಳಿ ಬಳಿಯ ಟೋಲ್‌ನಲ್ಲಿ ಸ್ಥಳೀಯರಿಂದ ಸುಂಕ ವಸೂಲಾತಿಗೆ ವಿನಾಯಿತಿ ನೀಡಬೇಕು ಎಂದು ಭಾರತ ಜನಜಾಗೃತಿ ಸೇನೆ ಜಿಲ್ಲಾ ಅಧ್ಯಕ್ಷ ಅಶ್ವತ್ಥಪ್ಪ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ ಎಂದು ದೂರಿದರು. ಮತದಾರರ ಗುರುತಿನ ಚೀಟಿ ಆಧರಿಸಿ ಸ್ಥಳೀಯರನ್ನು ಸುಂಕ ವಸೂಲಾತಿಯಿಂದ ಹೊರಗಿಡಬೇಕು ಎಂದು ಆಗ್ರಹಿಸಿದರು. ಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ ಮಾತನಾಡಿ, ಸರ್ಕಾರದ ಯೋಜನೆಗಳಿಗಾಗಿ ತಾಲ್ಲೂಕಿನಲ್ಲಿ ಜಮೀನು ಕಳೆದುಕೊಂಡ ರೈತರು ತಾಲ್ಲೂಕಿನಲ್ಲಿ ಹಲವರಿದ್ದಾರೆ.
ಇವರು ಬ್ಯಾಂಕುಗಳಿಂದ ಸಾಲ ಪಡೆದು ಆಟೊ, ಟ್ಯಾಕ್ಸಿ, ಸರಕು ಸಾಗಾಣಿಕೆ ವಾಹನಗಳನ್ನು ಖರೀದಿಸಿ ಆ ಮೂಲಕ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಟೋಲ್ ಸಂಗ್ರಹ ಕೈಬಿಡಬೇಕು. ಸ್ಥಳೀಯರಿಂದಲೇ ಯೋಜನೆ ಜಾರಿಗೆ ಭೂಮಿ ಪಡೆದು ಈಗ ಅವರಿಂದಲೇ ಟೋಲ್ ವಸೂಲಿ ಮಾಡುತ್ತಿರುವುದು ಖಂಡನೀಯ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.