ADVERTISEMENT

ಸುಪ್ರೀಂ ಕೋರ್ಟ್‌ಗೆ ನ್ಯಾ.ಸೇನ್?

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 20:22 IST
Last Updated 4 ಡಿಸೆಂಬರ್ 2012, 20:22 IST

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಅವರು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಹೊಂದಲಿದ್ದಾರೆಯೇ? `ವಕೀಲರ ದಿನಾಚರಣೆ' ಕಾರ್ಯಕ್ರಮದಲ್ಲಿ ಕೇಳಿಬಂದ ಮಾತುಗಳು ಈ ಪ್ರಶ್ನೆಗೆ `ಹೌದು' ಎಂಬ ಉತ್ತರ ನೀಡುತ್ತವೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಅವರು, `ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಹೊಂದಲಿರುವ ಮುಖ್ಯ ನ್ಯಾಯಮೂರ್ತಿ ಸೇನ್ ಅವರಿಗೆ ಅಭಿನಂದನೆಗಳು' ಎಂದರು. ಆ ಮೂಲಕ ನ್ಯಾ. ಸೇನ್ ಪದೋನ್ನತಿಯನ್ನು ಸೂಚ್ಯವಾಗಿ ತಿಳಿಸಿದರು.

ಹೈಕೋರ್ಟ್‌ನಲ್ಲಿ ಎಂಟು ಹುದ್ದೆಗಳು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 180 ನ್ಯಾಯಾಧೀಶರ ಹುದ್ದೆ ಖಾಲಿ ಇದೆ. ಇದನ್ನು ಭರ್ತಿ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಬ್ಬಾರೆಡ್ಡಿ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.