ಬೆಂಗಳೂರು: ಪದ್ಮಶ್ರೀ ವೈದ್ಯಕೀಯ ಪ್ರಯೋಗಾಲಯ ಸಂಸ್ಥೆಯು ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ವೈದ್ಯಕೀಯ ಪ್ರಯೋಗಾಲಯ ಸಪ್ತಾಹದ ಅಂಗವಾಗಿ ರೋಗಿಯ ರಕ್ತನಾಳದಿಂದ ಸುರಕ್ಷಿತ ವಿಧಾನದ ಮೂಲಕ ರಕ್ತ ಪಡೆಯುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಪ್ರಯೋಗಾಲಯ ವೃತ್ತಿಪರರೊಂದಿಗೆ ಸಮಾಲೋಚಿಸುವುದರ ಜತೆಗೆ, ಈ ಬಗ್ಗೆ ಸೂಕ್ತ ಅರಿವು ಮೂಡಿಸಿದರು.
ಸಪ್ತಾ ಉದ್ಘಾಟಿಸಿ ಮಾತನಾಡಿದ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ರಮಾನಂದಶೆಟ್ಟಿ, ‘ಪ್ರಯೋಗಾಲಯದ ಪರೀಕ್ಷೆಗಳ ಮೇಲೆ ಪರಿಣಾಮ ಬೀರುವ ಬಹುತೇಕ ದೋಷಗಳು ಪರೀಕ್ಷಾಪೂರ್ವ ಹಂತದಲ್ಲಿ ಕಂಡು ಬರುತ್ತವೆ.
ಏಕೆಂದರೆ, ರಕ್ತವನ್ನು ತೆಗೆದುಕೊಳ್ಳಲು ನಿರ್ದಿಷ್ಟ ಮಾನದಂಡಗಳಿಲ್ಲ. ಇದು ಪ್ರಯೋಗಾಲಯಗಳ ಅಧಿಕಾರ ವ್ಯಾಪ್ತಿಯಲ್ಲಿಲ್ಲದಿದ್ದರೂ ದೋಷಗಳಿಂದ ಪ್ರಯೋಗಾಲಯಗಳು ಅಪಖ್ಯಾತಿಗೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಪದ್ಮಶ್ರೀ ಸಮೂಹ ವಿದ್ಯಾ ಸಂಸ್ಥೆಗಳ ನಿರ್ದೇಶಕ ರಾಜೇಶ್ ಶೆಣೈ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.