ADVERTISEMENT

ಸೇಂಟ್‌ಬೆಸಿಲಿಕಾ ರಥೋತ್ಸವದಲ್ಲಿ ಬೆಂಕಿ ಆಕಸ್ಮಿಕ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2012, 20:59 IST
Last Updated 24 ಡಿಸೆಂಬರ್ 2012, 20:59 IST

ಬೆಂಗಳೂರು: ಶಿವಾಜಿನಗರದ ಸೇಂಟ್ ಬೆಸಿಲಿಕಾ ಚರ್ಚ್‌ನಲ್ಲಿ ಕ್ರಿಸ್‌ಮಸ್ ಅಂಗವಾಗಿ ಸೋಮವಾರ ರಾತ್ರಿ ನಡೆಯುತ್ತಿದ್ದ ರಥೋತ್ಸವದ ಸಂದರ್ಭದಲ್ಲಿ ಬೆಂಕಿ ಹತ್ತಿಕೊಂಡಿದೆ.ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡು ರಥ ಬೆಂಕಿಗೆ ಆಹುತಿಯಾಗಿದೆ.

ರಾತ್ರಿ ರಥೋತ್ಸವ ನಡೆಯುತ್ತಿದ್ದ ವೇಳೆ ವಿದ್ಯುತ್ ಶಾಟ್ ಸರ್ಕಿಟ್‌ನಿಂದ ರಥದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿಯನ್ನು ನಂದಿಸಿದರು.  ರಥದಲ್ಲಿ ಕ್ರಿಸ್ತನ ಜನನದ ಸನ್ನಿವೇಶವನ್ನು ಸೃಷ್ಟಿಸಲಾಗಿತ್ತು. ಇದಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಒಣ ಹುಲ್ಲನ್ನು ಬಳಸಿದ್ದರು. ಆದ್ದರಿಂದ ಬೆಂಕಿ ಕೆಲ ಸಮಯದಲ್ಲೇ ಇಡೀ ರಥವನ್ನು ವ್ಯಾಪಿಸಿದೆ.ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.