ADVERTISEMENT

ಸೇವಾ ಮನೊಭಾವ ಬೆಳೆಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2011, 19:40 IST
Last Updated 2 ಫೆಬ್ರುವರಿ 2011, 19:40 IST

ಕೆಂಗೇರಿ: ವಿದ್ಯಾರ್ಥಿಗಳು ಸೇವಾ ಮನೊಭಾವವನ್ನು ಮೈಗೂಡಿಸಿಕೊಂಡು ಸಮಾಜದ ಸುಧಾರಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಸಿದ್ದಲಿಂಗಯ್ಯ ಕರೆ ನೀಡಿದರು.

ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಡಾ.ಎಂ.ಎಸ್.ತಿಮ್ಮಪ್ಪ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನಾ (ಎನ್‌ಎಸ್‌ಎಸ್) ಘಟಕದ ವತಿಯಿಂದ ಸ್ವಯಂ ಸೇವಕರಿಗಾಗಿ ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಂದಾಯ ಇಲಾಖೆಯ ಕಾರ್ಯದರ್ಶಿ ಬಿ.ಆರ್.ಜಯರಾಮರಾಜೇ ಅರಸ್ ಕಾರ್ಯಕ್ರಮ ಉದ್ಘಾಟಿಸಿದರು.

ರಾಜಾಜಿನಗರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎ. ಎಂ.ಆರ್.ಕೊಟ್ರಯ್ಯ, ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಪಿ.ಸಿ. ಕೃಷ್ಣಸ್ವಾಮಿ, ಕಾರ್ಯಕ್ರಮಾಧಿಕಾರಿಗಳಾದ ಡಾ.ಗೀತಾ ಮಾದೇಶ್, ನಾಗರಾಜು ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.