ADVERTISEMENT

ಸೋಮಣ್ಣ ಮೇಲೆ ಹಲ್ಲೆ: ಆರೋಪಿ ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2011, 19:30 IST
Last Updated 2 ಅಕ್ಟೋಬರ್ 2011, 19:30 IST

ಬೆಂಗಳೂರು: ಸಚಿವ ವಿ.ಸೋಮಣ್ಣ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಆರೋಪಿ ಬಿ.ಎಸ್.ಪ್ರಸಾದ್‌ನನ್ನು ನ್ಯಾಯಾಲಯ ಮೂರು ದಿನಗಳ ಕಾಲ ವಿಧಾನಸೌಧ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದೆ.

ಶನಿವಾರ ಬೆಳಿಗ್ಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಸೋಮಣ್ಣ ಅವರ ಮೇಲೆ ಆರೋಪಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ. ಈ ಹಿನ್ನೆಲೆಯಲ್ಲಿ ವಿಧಾನಸೌಧ ಠಾಣೆ ಪೊಲೀಸರು ಪ್ರಸಾದ್‌ನನ್ನು ಬಂಧಿಸಿದ್ದರು.

ಭಾನುವಾರ ಬೆಳಿಗ್ಗೆ ನಗರದ ಎಂಟನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು  ಆರೋಪಿಯನ್ನು ಹಾಜರುಪಡಿಸಿದ್ದು, ಬುಧವಾರದವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.