ADVERTISEMENT

ಸೋಲು ಅನಿರೀಕ್ಷಿತ: ಸಿ.ಎಂ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 19:30 IST
Last Updated 21 ಮಾರ್ಚ್ 2012, 19:30 IST

ಬೆಂಗಳೂರು: `ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಸೋಲನ್ನು ನಿರೀಕ್ಷಿಸಿರಲಿಲ್ಲ. ಈ ಉಪ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬಂದಿದೆ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿದ ಅವರು, `ನಾವು ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಜನರಿಂದ ವ್ಯಕ್ತವಾದ ಪ್ರತಿಕ್ರಿಯೆ ಬಿಜೆಪಿಗೆ ಪೂರಕವಾಗಿತ್ತು. ಆದರೆ, ಅನಿರೀಕ್ಷಿತ ರೀತಿಯಲ್ಲಿ ನಮಗೆ ಸೋಲಾಗಿದೆ. ಈ ಸೋಲನ್ನು ಒಪ್ಪಿಕೊಳ್ಳಲೇಬೇಕು~ ಎಂದರು.

`ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಚಾರದಲ್ಲಿ ಭಾಗವಹಿಸದೇ ಇರುವುದು ಸೋಲಿಗೆ ಕಾರಣವೇ~ ಎಂಬ ಪ್ರಶ್ನೆಗೆ, `ಈಗಷ್ಟೇ ಚುನಾವಣಾ ಫಲಿತಾಂಶ ಬಂದಿದೆ. ಸೋಲಿಗೆ ಏನು ಕಾರಣ ಎಂಬುದನ್ನು ಈಗಲೇ ಹೇಳಲಾಗದು. ಪಕ್ಷದ ಅಭ್ಯರ್ಥಿಯ ಪರಾಜಯಕ್ಕೆ ಕಾರಣವಾದ ಅಂಶಗಳ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ~ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.