ಕೃಷ್ಣರಾಜಪುರ: `ಕ್ರೀಡೆಗಳಲ್ಲಿ ಸೋಲುಗೆಲುವು ಸಾಮಾನ್ಯ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮ ಚಿತ್ತದಿಂದ ಸ್ವೀಕರಿಸುವ ಮನೋಭಾವ ಹೊಂದಿರಬೇಕು~ ಎಂದು ತಾಲ್ಲೂಕು ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಉಷಾ ರಾಣಿ ಅವರು ನುಡಿದರು.
ಎಸ್‌ಇಎ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಕ್ರೀಡಾ ಪಂದ್ಯಾವಳಿಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಹುಮಾನ ವಿತರಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಗಜೇಂದ್ರ, `ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸಲು ಮತ್ತು ಅವರಿಗೆ ಎಲ್ಲ ಸಹಕಾರ ನೀಡಲು ದಾನಿಗಳು ನೆರವು ನೀಡುತ್ತಿದ್ದಾರೆ.
ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿ ದೆಸೆಯಲ್ಲಿಯೇ ಹೆಚ್ಚಿನ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಶಿಕ್ಷಕರು ಪ್ರೋತ್ಸಾಹಿಸಬೇಕು~ ಎಂದು ಮನವಿ ಮಾಡಿದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣ, ಸಾಮಾಜಿಕ ಕಾರ್ಯರ್ತ ಗುರುರಾಜ್, ಮುಖ್ಯ ಶಿಕ್ಷಕ ಮುನಿವೆಂಕಟಪ್ಪ, ಮುನಿರಾಜು, ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು. ಕ್ರೀಡಾ ಕಾರ್ಯದರ್ಶಿ ಎನ್.ವೆಂಕಟಪ್ಪ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.