ADVERTISEMENT

ಸ್ಥಳೀಯರು ಮುಂದೆ ಬರಲಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2011, 19:35 IST
Last Updated 4 ಸೆಪ್ಟೆಂಬರ್ 2011, 19:35 IST

ಬೆಂಗಳೂರು: ವಿಲ್ಸನ್‌ಗಾರ್ಡನ್, ಹೊಂಬೇಗೌಡ ನಗರ ಎಂದು ಮರು ನಾಮಕರಣ ಮಾಡುವ ಬಗ್ಗೆ ಪಾಲಿಕೆಯಲ್ಲಿ ನಿರ್ಣಯವಾಗಿರುವುದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸ್ಥಳೀಯರು ಮುಂದಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಮಾಜಿ ಅಧ್ಯಕ್ಷ ಕೋ.ವೆಂ.ರಾಮಕೃಷ್ಣಗೌಡ ಅಭಿಪ್ರಾಯಪಟ್ಟಿದ್ದಾರೆ.

ಹೊಂಬೇಗೌಡನಗರದ ಸಮೃದ್ಧ ಕರ್ನಾಟಕ ಸೇನೆ ಹಮ್ಮಿಕೊಂಡಿದ್ದ ಪ್ರತಿಭಾನ್ವಿತ ಮಕ್ಕಳ ಸನ್ಮಾನ ಮತ್ತು ಬಡ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ರಸ್ತೆಗಳಿಗೆ ಇಟ್ಟಿರುವ ಕನ್ನಡದ ಮಹನೀಯರ ಹೆಸರುಗಳನ್ನು ಸಂಕ್ಷಿಪ್ತವಾಗಿ ಬಳಸುವ ರೂಢಿ ತಪ್ಪಿಸಲು ಕೂಡ ಕನ್ನಡಿಗರ ಮನಸ್ಥಿತಿ ಬದಲಾಗಬೇಕು. ಶಾಲಾ ಮಕ್ಕಳಲ್ಲಿ ಕನ್ನಡ ಬಳಸುವುದನ್ನು ಬಿತ್ತುವ ಕಾರ್ಯ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.