
ಪ್ರಜಾವಾಣಿ ವಾರ್ತೆಯಲಹಂಕ: ವಿಕ್ಟೋರಿಯಾ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಚಿಕ್ಕಜಾಲ ಸರ್ಕಾರಿ ಶಾಲೆಯ ಆವರಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನದ ನೋಂದಣಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಕೃಷ್ಣ ಬೈರೇಗೌಡ ಅವರು, ‘ಆಪತ್ಕಾಲದಲ್ಲಿ ಮನುಷ್ಯನ ಪ್ರಾಣ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸುವ ರಕ್ತವನ್ನು ಸಂಗ್ರಹಿಸಿಟ್ಟುಕೊಳ್ಳುವುದು ಅತಿಮುಖ್ಯ. ಇದಕ್ಕೆ ಪೂರಕವಾಗಿ ಇಂತಹ ಶಿಬಿರಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು’ ಎಂದು ಆಶಿಸಿದರು.
ತಾ.ಪಂ. ಉಪಾಧ್ಯಕ್ಷೆ ಲಕ್ಷ್ಮೀ ರಮೇಶ್, ಜಿ.ಪಂ.ಮಾಜಿ ಅಧ್ಯಕ್ಷ ದೊಡ್ಡ ಬಸವ ರಾಜು, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸಯ್ಯ, ಕಾಂಗ್ರೆಸ್ ಮುಖಂಡ ನರ ಸಿಂಹಮೂರ್ತಿ, ವಿಕ್ಟೋರಿಯಾ ಆಸ್ಪತ್ರೆಯ ಡಾ.ವೀರನಾಗಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.