ಬೆಂಗಳೂರು: ಕನ್ನಡ ಚಿತ್ರೋದ್ಯಮದ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟವು ಗಾಂಧಿನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮಕ್ಕೆ ಮೆರವಣಿಗೆಯಲ್ಲಿ ಬರುತ್ತಿದ್ದ ನಟ ಶಿವರಾಜ್‌ಕುಮಾರ್ ಅವರ ಮೇಲೆ ರಸ್ತೆ ಬದಿಯ ಸ್ವಾಗತ ಕಮಾನು ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.
ಶಿವರಾಜ್‌ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರನ್ನು ಮೆರವಣಿಗೆ ಮೂಲಕ ಸಮಾರಂಭಕ್ಕೆ ಕರೆತರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಶಿವರಾಜ್‌ಕುಮಾರ್ ಅವರ ತಲೆಯ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ.
ಶಿವರಾಜ್‌ಕುಮಾರ್ ಅವರು ಚಿತ್ರರಂಗಕ್ಕೆ ಬಂದು 25 ವರ್ಷಗಳಾದ ಹಿನ್ನೆಲೆಯಲ್ಲಿ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟದ ಕಚೇರಿಯಲ್ಲಿ ಅವರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.