ADVERTISEMENT

ಹಂತ-ಹಂತವಾಗಿ ಸಮಸ್ಯೆ ಪರಿಹಾರಕ್ಕೆ ಯತ್ನದ ಭರವಸೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2011, 19:30 IST
Last Updated 27 ಜೂನ್ 2011, 19:30 IST
ಹಂತ-ಹಂತವಾಗಿ ಸಮಸ್ಯೆ ಪರಿಹಾರಕ್ಕೆ ಯತ್ನದ ಭರವಸೆ
ಹಂತ-ಹಂತವಾಗಿ ಸಮಸ್ಯೆ ಪರಿಹಾರಕ್ಕೆ ಯತ್ನದ ಭರವಸೆ   

ತಲಘಟ್ಟಪುರ: `ಯಶವಂತಪುರ ಕ್ಷೇತ್ರ ವ್ಯಾಪ್ತಿಯಲ್ಲಿನ ಸಮಸ್ಯೆಗಳನ್ನು ಹಂತ-ಹಂತವಾಗಿ ಬಗೆಹರಿಸಲು ಪ್ರಯತ್ನ ನಡೆಸಲಾಗುವುದು~ ಎಂದು ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ.

ತಲಘಟ್ಟಪುರದಲ್ಲಿ ಬಿಬಿಎಂಪಿ ವತಿಯಿಂದ 28 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು.

`ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಗೆ ಸಂಪೂರ್ಣ ಗ್ರಾಮಾಂತರ ಪ್ರದೇಶ ಸೇರ್ಪಡೆಯಾಗಿದ್ದು, ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಪಾಲಿಕೆ ಮೇಯರ್ ಹಾಗೂ ಶಾಸಕರ ಅನುದಾನದಲ್ಲಿ ಕೋಟ್ಯಂತರ ರೂಪಾಯಿ ವ್ಯಯಿಸಿ ರಸ್ತೆ ಅಭಿವೃದ್ಧಿ, ಡಾಂಬರೀಕರಣ, ಉದ್ಯಾನವನ, ಸಿಮೆಂಟ್ ರಸ್ತೆ, ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕೆಲಸ ಕೈಗೊಳ್ಳಲಾಗಿದೆ~ ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಬಿಬಿಎಂಪಿ ಸದಸ್ಯೆ ವೀಣಾ ನಾಗರಾಜು ತಿಳಿಸಿದರು.

`ವಾರ್ಡ್‌ನ ಕೆಲವು ಪ್ರದೇಶಗಳಿಗೆ ಕಾವೇರಿ ನೀರು ಸರಬರಾಜು ಮಾಡಲಾಗಿದೆ. ಇನ್ನೂ ಹಲವು ಕಡೆ ನೀರಿನ ಸಮಸ್ಯೆ ಬಗೆಹರಿಸಲು 60 ಕೊಳವೆ ಬಾವಿ ಕೊರೆಸಲಾಗಿದ್ದು, ಮುಂದಿನ ದಿನಗಳಲ್ಲಿ ಆದ್ಯತೆ ಮೇರೆಗೆ ಕಾವೇರಿ ನೀರು ಪೂರೈಸಲು ಪ್ರಯತ್ನ ಮುಂದುವರಿಸಲಾಗುವುದು~ ಎಂದು ಆಶ್ವಾಸನೆ ನೀಡಿದರು.

ಬಿಬಿಎಂಪಿ ಹೆಚ್ಚುವರಿ ಆಯುಕ್ತ ಕೆ.ಎಂ.ರಾಮಚಂದ್ರನ್, ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ  ಎಸ್.ವಿ.ರಮೇಶ್, ಮುದ್ದುರಾಜ್, ಜಿ.ಪಂ.ಸದಸ್ಯ ಎ.ಶಿವಕುಮಾರ್, ಜಾಗೃತಿ ಸಮಿತಿ ಅಧ್ಯಕ್ಷ ಜಿ.ವಿಜಯ್‌ಕುಮಾರ್, ಕಂಠೀರವ ಸ್ಟುಡಿಯೋ ಅಧ್ಯಕ್ಷ ಎಂ. ರುದ್ರೇಶ್, ತಾ.ಪಂ. ಮಾಜಿ ಅಧ್ಯಕ್ಷ ಎಚ್. ನಾಗರಾಜು, ಬಿಬಿಎಂಪಿ ಸದಸ್ಯ ಅಂಜನಪ್ಪ, ನಗರಸಭೆ ಮಾಜಿ ಸದಸ್ಯರಾದ ಮುನಿರಾಜು, ಗಂಗಣ್ಣ, ವಾರ್ಡ್ ಅಧ್ಯಕ್ಷ ಜಯರಾಮಗೌಡ, ಭೂನ್ಯಾಯ ಮಂಡಳಿ ಸದಸ್ಯ ವಜ್ರಪ್ಪ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.