ಬೆಂಗಳೂರು: ನವದೆಹಲಿಯ ಅಹಿಂಸಾ ಇಂಟರ್ನ್ಯಾಷನಲ್ ಸಂಸ್ಥೆ ನೀಡುವ 2012ನೇ ಸಾಲಿನ `ಅಹಿಂಸಾ ಇಂಟರ್ನ್ಯಾಷನಲ್ ಪ್ರಶಸ್ತಿ'ಗೆ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು 31 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ವಾಸ್ತುಶಿಲ್ಪ ಕ್ಷೇತ್ರಕ್ಕೆ ಹಂಪನಾ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಇದೇ 30ರಂದು ನವದೆಹಲಿಯಲ್ಲಿ ನಡೆಯಲಿದೆ.
ಮಂಗಳವಾರದ `ಪ್ರಜಾವಾಣಿ' ಸಂಚಿಕೆಯಲ್ಲಿ ಈ ಪ್ರಶಸ್ತಿಗೆ ಪ್ರೊ. ಕಮಲಾ ಹಂಪನಾ ಅವರು ಆಯ್ಕೆಯಾಗಿದ್ದಾರೆ ಎಂದು ತಪ್ಪಾಗಿ ಪ್ರಕಟವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.