ADVERTISEMENT

ಹಂಸಲೇಖ ಆಸ್ಪತ್ರೆಗೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2018, 20:01 IST
Last Updated 10 ಏಪ್ರಿಲ್ 2018, 20:01 IST
ಹಂಸಲೇಖ ಆಸ್ಪತ್ರೆಗೆ
ಹಂಸಲೇಖ ಆಸ್ಪತ್ರೆಗೆ   

ಬೆಂಗಳೂರು: ಎದೆ ನೋವು ಕಾಣಿಸಿಕೊಂಡಿದ್ದರಿಂದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಂಗಳವಾರ ಸಂಜೆ ಇಲ್ಲಿನ ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿರುವ ಪೋರ್ಟಿಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕ್ಕಲಸಂದ್ರದ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಜೀ–ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದ ಚಿತ್ರೀಕರಣದ ವೇಳೆ ಅವರಿಗೆ ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ಶಕುಂತ್ಲೆ’ ಸಿನಿಮಾದ ಸಿದ್ಧತೆಗಾಗಿ ಸಾಕಷ್ಟು ಒಡಾಟ ನಡೆಸಿದ್ದರಿಂದ ಕಾಲು ನೋವೂ ಕಾಣಿಸಿಕೊಂಡಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗುರುವಾರ ಅಥವಾ ಶುಕ್ರವಾರ ಮನೆಗೆ ಮರಳಲಿದ್ದಾರೆ’ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.