ADVERTISEMENT

ಹಂಸಲೇಖ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2011, 19:30 IST
Last Updated 18 ಮಾರ್ಚ್ 2011, 19:30 IST

ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ಜಾನಪದ ಕಲಾವಿದರು ಮತ್ತು ಸವಿತಾ ಸಮಾಜದವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಕ್ಷೌರಿಕರ ಹಿತರಕ್ಷಣಾ ವೇದಿಕೆ ಸದಸ್ಯರು ನಗರದ ಮಲ್ಲೇಶ್ವರ ಮೈದಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
 
ಜಾನಪದ ಕಲಾವಿದರು ಮತ್ತು ಸವಿತಾ ಸಮಾಜದವರನ್ನು ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ನಿಂದಿಸಿರುವ ಹಂಸಲೇಖ ಅವರು ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ರಾಜ್ಯದೆಲ್ಲೆಡೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಜಾತಿ ನಿಂದನೆ ಪ್ರಕರಣಗಳು ಮರುಕಳಿಸದಂತೆ ಸರ್ಕಾರ ಸಹ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಮೂಲಕ ಇದಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದರು. ವೇದಿಕೆಯ ಜಂಟಿ ಕಾರ್ಯದರ್ಶಿ ಎಂ,ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.