ADVERTISEMENT

ಹಗರಣದಲ್ಲಿ ಭಾಗಿಯಾಗಿಲ್ಲ- ಮೋಟಮ್ಮ

​ಪ್ರಜಾವಾಣಿ ವಾರ್ತೆ
Published 31 ಜನವರಿ 2013, 19:22 IST
Last Updated 31 ಜನವರಿ 2013, 19:22 IST
ಹಗರಣದಲ್ಲಿ ಭಾಗಿಯಾಗಿಲ್ಲ- ಮೋಟಮ್ಮ
ಹಗರಣದಲ್ಲಿ ಭಾಗಿಯಾಗಿಲ್ಲ- ಮೋಟಮ್ಮ   

ಬೆಂಗಳೂರು:  `ಎಚ್‌ಎಂಟಿ ಕಾರ್ಖಾನೆಯ ಜಮೀನು ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ಈ ಆರೋಪ ಆಧಾರರಹಿತ. ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ' ಎಂದು ವಿಧಾನಪರಿಷತ್ ಸದಸ್ಯೆ ಮೋಟಮ್ಮ ಸವಾಲು ಹಾಕಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬಿಬಿಎಂಪಿ ಸದಸ್ಯ ಎನ್.ಆರ್. ರಮೇಶ್ ರಾಜಕೀಯ ಒತ್ತಡಕ್ಕೆ ಒಳಗಾಗಿ ನನ್ನ ವಿರುದ್ಧ ಭೂಹಗರಣದ ಆರೋಪ ಮಾಡಿದ್ದಾರೆ. ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ' ಎಂದು ಎಚ್ಚರಿಸಿದರು.

`ಎಚ್‌ಎಂಟಿ ಕಾರ್ಖಾನೆಗೆ ಸೇರಿರುವ 202 ಎಕರೆ ಜಾಗವನ್ನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುಮತಿ ಪಡೆಯದೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಈ ಹಗರಣದಲ್ಲಿ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ' ಎಂದು ರಮೇಶ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪ ಮಾಡಿದ್ದರು.

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಒಂದು ವೇಳೆ ಪಕ್ಷ ಸೂಚಿಸಿದರೆ ಮೂಡಿಗೆರೆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.