ADVERTISEMENT

ಹಟ್ಟಿಚಿನ್ನದ ಗಣಿ ಕಂಪೆನಿಯಿಂದ 7.2 ಕೋಟಿ ದೇಣಿಗೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2011, 20:05 IST
Last Updated 22 ಫೆಬ್ರುವರಿ 2011, 20:05 IST

ಬೆಂಗಳೂರು: ಹಟ್ಟಿ ಚಿನ್ನದ ಗಣಿ ಕಂಪೆನಿಯು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಂಗಳವಾರ ಒಟ್ಟು 7.2 ಕೋಟಿ ರೂಪಾಯಿಗಳ ದೇಣಿಗೆ ನೀಡಿದೆ.

5 ಕೋಟಿ ರೂಪಾಯಿ ಮತ್ತು 2.20 ಕೋಟಿ ರೂಪಾಯಿಗಳ ಚೆಕ್ ಅನ್ನು ಹಟ್ಟಿ ಚಿನ್ನದ ಗಣಿ ಕಂಪೆನಿಯ ಅಧ್ಯಕ್ಷ ಎಸ್.ವಿ. ರಾಮಚಂದ್ರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನ ಸೌಧದಲ್ಲಿ ಹಸ್ತಾಂತರಿಸಿದರು.

2010ರ ಆಗಸ್ಟ್ ತಿಂಗಳಿನಲ್ಲಿ ಕಂಪೆನಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ 5 ಕೋಟಿ ನೀಡಿತ್ತು. ಇದರಿಂದ  2010-11ನೆಯ ಆರ್ಥಿಕ ವರ್ಷದಲ್ಲಿ ಕಂಪೆನಿ ಒಟ್ಟು 12.2 ಕೋಟಿ ರೂಪಾಯಿಗಳನ್ನು ನೀಡಿದಂತಾಗಿದೆ. ಕಂಪೆನಿಯ ಆಡಳಿತ ನಿರ್ದೇಶಕ ಡಾ.ವಿ. ಚಂದ್ರಶೇಖರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.