ADVERTISEMENT

ಹತ್ಯೆಗೆ ಸುಪಾರಿ ನೀಡಿದ್ದ ಆರೋಪ: ರವಿ ಬೆಳಗೆರೆಗೆ ಮಧ್ಯಂತರ ಜಾಮೀನು

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2017, 11:02 IST
Last Updated 13 ಡಿಸೆಂಬರ್ 2017, 11:02 IST
ಹತ್ಯೆಗೆ ಸುಪಾರಿ ನೀಡಿದ್ದ ಆರೋಪ: ರವಿ ಬೆಳಗೆರೆಗೆ ಮಧ್ಯಂತರ ಜಾಮೀನು
ಹತ್ಯೆಗೆ ಸುಪಾರಿ ನೀಡಿದ್ದ ಆರೋಪ: ರವಿ ಬೆಳಗೆರೆಗೆ ಮಧ್ಯಂತರ ಜಾಮೀನು   

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ   ‘ಹಾಯ್‌ ಬೆಂಗಳೂರು’ ಪತ್ರಿಕೆ ಸಂಸ್ಥಾಪಕ ರವಿ ಬೆಳಗೆರೆಗೆ ನ್ಯಾಯಾಲಯ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಸಿಟಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಡಿಸೆಂಬರ್‌ 16ರ ವರೆಗೂ ರವಿ ಬೆಳಗೆರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ.

ಇದೇ ವೇಳೆ ತನಿಖೆಗೆ ಸಹಕರಿಸುವಂತೆ ನ್ಯಾಯಾಲಯ ರವಿ ಬೆಳಗೆರೆಗೆ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.