
ಪ್ರಜಾವಾಣಿ ವಾರ್ತೆಬೆಂಗಳೂರು: ಕಾರ್ಮಿಕ ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಕೆ.ಆರ್.ನಿರಂಜನ್ ಅವರನ್ನು ಕಾರ್ಮಿಕ ಇಲಾಖೆಯ ನೂತನ ಆಯುಕ್ತರನ್ನಾಗಿ ನೇಮಿಸಲಾಗಿದೆ.
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಚುನಾವಣಾ ವೆಚ್ಚ ಮೇಲುಸ್ತುವಾರಿ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಯಲ್ಲಿರುವ ಪಂಕಜ್‌ಕುಮಾರ್ ಪಾಂಡೆ ಅವರಿಗೆ ಉದ್ಯೋಗ ಮತ್ತು ತರಬೇತಿ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.