ADVERTISEMENT

ಹಾಕಿ: ಬೆಂಗಳೂರು ಗ್ರಾಮಾಂತರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 18:30 IST
Last Updated 4 ಅಕ್ಟೋಬರ್ 2012, 18:30 IST

ಹೊಸಕೋಟೆ: ಇಲ್ಲಿಯ ಚನ್ನಬೆೃರೇಗೌಡ ಕ್ರೆಡಾಂಗಣದಲ್ಲಿ ಗುರುವಾರ ಮುಕ್ತಾಯಗೊಂಡ ಬೆಂಗಳೂರು ವಿಭಾಗ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಡ ಅಂತಿಮ ಪಂದ್ಯದಲ್ಲಿ ಚಿತ್ರದುರ್ಗ ಜಿಲ್ಲಾ ತಂಡದ ವಿರುದ್ದ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ಬಾಲಕರ ವಿಭಾಗದಲ್ಲಿ ಶಿವಮೊಗ್ಗ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ದ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿನ ಅಂತಿಮ ಪಂದ್ಯದಲ್ಲಿ ಬೆಂಗಳೂರು ಉತ್ತರ ತಂಡ ಬೆಂಗಳೂರು ದಕ್ಷಿಣ ತಂಡದ ವಿರುದ್ದ ಹಾಗು ಬಾಲಕಿಯರ ವಿಭಾಗದಲ್ಲಿ ಶಿವಮೊಗ್ಗ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ದ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.