ADVERTISEMENT

`ಹಾವೇರಿಗಿಂತ ಕಾವೇರಿ ಮುಖ್ಯ'

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2012, 22:00 IST
Last Updated 9 ಡಿಸೆಂಬರ್ 2012, 22:00 IST

ಬೆಂಗಳೂರು: `ನಮಗೆ ಹಾವೇರಿಗಿಂತ ಕಾವೇರಿ ಮುಖ್ಯ' ಎಂದು ಹೇಳಿರುವ ಬಿಜೆಪಿ ಮುಖಂಡ ಎಂ.ವೆಂಕಯ್ಯ ನಾಯ್ಡು, ಬಿಜೆಪಿ ಶಾಸಕರು ಕೆಜೆಪಿ ಜೊತೆ ಗುರುತಿಸಿಕೊಂಡಿರುವ ವಿಚಾರದ ಬಗ್ಗೆ ಕಾದು ನೋಡುವ ತಂತ್ರ ಅನುಸರಿಸುವುದಾಗಿ ತಿಳಿಸಿದರು.ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ತತ್ವ-ಸಿದ್ಧಾಂತ ಆಧರಿಸಿ ಕಟ್ಟಿರುವ ಪಕ್ಷ ನಮ್ಮದು.

ಪಕ್ಷದ ಸಿದ್ಧಾಂತ ಒಪ್ಪುವವರಿಗೆ ನಮ್ಮ ಜೊತೆ ಇರುವಂತೆ ಹೇಳುತ್ತೇವೆ. ಬಿಜೆಪಿ ಸರ್ಕಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಮಾಡಿದ ಒಳ್ಳೆಯ ಕೆಲಸಗಳ ಕುರಿತು ಜನರಿಗೆ ಮನವರಿಕೆ ಮಾಡುತ್ತೇವೆ' ಎಂದರು.ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿಗರು ಅನಗತ್ಯ ಟೀಕೆ ಮಾಡುತ್ತಿದ್ದಾರೆ. ಇದರ ಬದಲು, ಕಾವೇರಿ ನದಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ, ರಾಜ್ಯ ಸಂಕಷ್ಟದಲ್ಲಿದೆ ಎಂಬುದನ್ನು ಮನವರಿಕೆ ಮಾಡಿಕೊಡಲಿ ಎಂದು ಸವಾಲೆಸೆದರು.

ಬಹುಬ್ರ್ಯಾಂಡ್ ಚಿಲ್ಲರೆ ಮಾರಾಟ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ವಿಚಾರದಲ್ಲಿ ಯುಪಿಎ ಸರ್ಕಾರ ತಾಂತ್ರಿಕವಾಗಿ ಮಾತ್ರ ಗೆಲುವು ಸಾಧಿಸಿದೆ. ಎಫ್‌ಡಿಐ ವಿಚಾರವನ್ನು ಬಿಜೆಪಿ ಜನತಾ ನ್ಯಾಯಾಲಯಕ್ಕೆ ಕೊಂಡೊಯ್ಯಲಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ಬಗ್ಗೆ ಬಿಜೆಪಿ ಪ್ರಚಾರ ನಡೆಸಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT