ADVERTISEMENT

ಹಿಂಬದಿ ಸವಾರರ ಪ್ರಯಾಣಕ್ಕೆ ಅವಕಾಶ ಇಲ್ಲ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2017, 19:30 IST
Last Updated 21 ಅಕ್ಟೋಬರ್ 2017, 19:30 IST
ಹಿಂಬದಿ ಸವಾರರ ಪ್ರಯಾಣಕ್ಕೆ ಅವಕಾಶ ಇಲ್ಲ
ಹಿಂಬದಿ ಸವಾರರ ಪ್ರಯಾಣಕ್ಕೆ ಅವಕಾಶ ಇಲ್ಲ   

ಬೆಂಗಳೂರು: ಹೊಸದಾಗಿ ಖರೀದಿಸುವ 100 ಸಿಸಿಗೂ ಕಡಿಮೆ ಸಾಮರ್ಥ್ಯದ ಎಂಜಿನ್ ಹೊಂದಿರುವ ದ್ವಿಚಕ್ರ ವಾಹನಗಳಲ್ಲಿ ಇನ್ನು ಮುಂದೆ ಹಿಂಬದಿ ಸವಾರರು ಪ್ರಯಾಣಿಸುವಂತಿಲ್ಲ.

ಹೈಕೋರ್ಟ್‌ನ ಇತ್ತೀಚಿನ ಆದೇಶದ ಅನುಸಾರ ಹಿಂಬದಿ ಸವಾರರ ಸೀಟು ಹೊಂದಿರುವ ದಿಚಕ್ರ ವಾಹನಗಳ ನೋಂದಣಿ ಮಾಡದಂತೆ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸಾರಿಗೆ ಇಲಾಖೆ ನಿರ್ದೇಶನ ನೀಡಿದೆ.

‘ಕರ್ನಾಟಕ ಮೋಟಾರು ವಾಹನ ಕಾಯ್ದೆ–1989ರ ಅನುಸಾರ 100 ಸಿಸಿಗೂ ಕಡಿಮೆ ಸಾಮರ್ಥ್ಯದ ಎಂಜಿನ್ ಹೊಂದಿರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿಯ ಸವಾರರು ಪ್ರಯಾಣ ಮಾಡುವಂತಿಲ್ಲ. ಆದರೆ, ದಿಚಕ್ರ ವಾಹನ ತಯಾರಿಕಾ ಕಂಪೆನಿಗಳು ಈ ಕಾನೂನು ಪಾಲಿಸುತ್ತಿರಲಿಲ್ಲ’ ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.