ADVERTISEMENT

ಹೆಚ್ಚಿನ ಚಿಕಿತ್ಸೆಗಾಗಿ ಅನಂತಯ್ಯಶೆಟ್ಟಿ ನಿಮ್ಹಾನ್ಸ್‌ಗೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2013, 19:32 IST
Last Updated 6 ಜೂನ್ 2013, 19:32 IST

ಬೆಂಗಳೂರು: ಒಂದೂವರೆ ವರ್ಷದ ಗೃಹಬಂಧನದಿಂದ ಮುಕ್ತಿ ಪಡೆದು ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಂತಯ್ಯಶೆಟ್ಟಿ (93) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರುವಾರ ನಿಮ್ಹಾನ್ಸ್‌ಗೆ ವರ್ಗಾಯಿಸಲಾಯಿತು.

`ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಅನಂತಯ್ಯಶೆಟ್ಟಿ ಅವರನ್ನು ನಿಮ್ಹಾನ್ಸ್‌ಗೆ ಕರೆತರಲಾಯಿತು. ನರರೋಗ ತಜ್ಞರು ಹಾಗೂ ಮನೋವೈದ್ಯರು ಶುಕ್ರವಾರ ಅವರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧರಿಸಲಿದ್ದಾರೆ.

ವಾರದೊಳಗೆ ಅವರು ಗುಣಮುಖರಾಗಿ ಮನೆಗೆ ಮರಳಲಿದ್ದಾರೆ' ಎಂದು ನಿಮ್ಹಾನ್ಸ್‌ನ ವೈದ್ಯಕೀಯ ಅಧೀಕ್ಷಕ ವಿ.ಎಲ್ ಸತೀಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.