ಬೆಂಗಳೂರು: ಹೆಲ್ಮೆಟ್ ಕಡ್ಡಾಯ ನಿಯಮ ಉಲ್ಲಂಘನೆ ವಿರುದ್ಧ ನಗರದ ವಿವಿಧೆಡೆ ಗುರುವಾರ ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಒಟ್ಟು 5,861 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ₹ 5.86 ಲಕ್ಷ ದಂಡ ವಸೂಲಿ ಮಾಡಿದ್ದಾರೆ.
‘ಬೆಳಿಗ್ಗೆಯಿಂದ ಸಂಜೆ 6 ಗಂಟೆವರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಈ ಪೈಕಿ ಪೂರ್ವ ವಿಭಾಗದಲ್ಲಿ 2,924 ಹಾಗೂ ಪಶ್ಚಿಮ ವಿಭಾಗದಲ್ಲಿ 2,937 ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ಸಂಚಾರ ವಿಭಾಗ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ ತಿಳಿಸಿದರು.
‘ಕಾರ್ಯಾಚರಣೆಗಾಗಿ ಸಾರಿಗೆ ಅಧಿಕಾರಿಗಳು ಮತ್ತು ಸಂಚಾರ ಪೊಲೀಸರನ್ನೊಳಗೊಂಡ 10 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ನಗರದ ಹಲವೆಡೆ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡುತ್ತಿವೆ’ ಎಂದು ಹೇಳಿದರು. ನಿಯಮ ಉಲ್ಲಂಘನೆ ವಿರುದ್ಧ ಜ. 20ರಿಂದ ಕಾರ್ಯಾಚರಣೆ ಆರಂಭಿಸಿ 1,522 ವಿರುದ್ಧ ಪ್ರಕರಣ ದಾಖಲಿಸಿ, ₹ 1.5 ಲಕ್ಷ ದಂಡ ವಸೂಲಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.