ADVERTISEMENT

ಹೈಕೋರ್ಟ್‌ಗೆ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2013, 19:47 IST
Last Updated 13 ಏಪ್ರಿಲ್ 2013, 19:47 IST

ಬೆಂಗಳೂರು: 8 ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಕೇಂದ್ರೀಯ ಆಡಳಿತ ನ್ಯಾಯಮಂಡಳಿಯ ಆದೇಶ ಪ್ರಶ್ನಿಸಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲು ಏರಲು ಸಿದ್ಧತೆ ನಡೆಸಿವೆ.

ಐಎಎಸ್ ಅಧಿಕಾರಿಗಳಾದ ಬಿ.ಎನ್.ಕೃಷ್ಣಯ್ಯ ಸೇರಿದಂತೆ ಒಟ್ಟು 12 ಮಂದಿಯನ್ನು ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಇದರಲ್ಲಿ ಎಂಟು ಮಂದಿ ವರ್ಗಾವಣೆ ಆದೇಶವನ್ನು ಸಿ.ಎ. ಟಿ.ಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ತಡೆಯಾಜ್ಞೆ ನೀಡಿದ್ದು, ಅದನ್ನು ಪ್ರಶ್ನಿಸಿ, ಹೈಕೋರ್ಟ್‌ನಲ್ಲಿ ಸೋಮವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.