ADVERTISEMENT

ಹೊಸಕೋಟೆ: ಸಂಭ್ರಮದ ಕಾರ್ತೀಕೋತ್ಸವ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2018, 19:14 IST
Last Updated 3 ಡಿಸೆಂಬರ್ 2018, 19:14 IST

ಹೊಸಕೋಟೆ: ತಾಲ್ಲೂಕಿನಾದ್ಯಂತ ಕಡೆಯ ಕಾರ್ತೀಕ ಸೋಮವಾರವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಎಲ್ಲ ಶಿವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಎಲ್ಲೆಡೆ ನೂರಾರು ಹಣತೆ ದೀಪಗಳನ್ನು ಬೆಳಗಿಸಲಾಯಿತು. ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಪಟ್ಟಣದ ಇತಿಹಾಸ ಪ್ರಸಿದ್ಧ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇವಾಲಯದ ಆವರಣದಲ್ಲಿ ಕಡಲೆಕಾಯಿ ವ್ಯಾಪಾರ ಬಿರುಸಿನಿಂದ ನಡೆಯಿತು.

ಪಟ್ಟಣದ ವೀರಶೈವ ಸಮಾಜದವರು ನಂದಿ ಧ್ವಜ, ಕರಡಿ ವಾದ್ಯ, ವೀರಭದ್ರ ನೃತ್ಯದೊಂದಿಗೆ ಬಸವೇಶ್ವರಸ್ವಾಮಿಯ ಪಲ್ಲಕ್ಕಿ ಉತ್ಸವವನ್ನು ಊರಿನ ಪ್ರಮುಖ ಬೀದಿಗಳಲ್ಲಿ ನಡೆಸಿದರು.

ADVERTISEMENT

ನಂತರ ಬಸವೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ‘ಅಗ್ನಿಕುಂಡ ಪ್ರವೇಶ’ವನ್ನು ಆಯೋಜಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.