ADVERTISEMENT

‘ಅವಕಾಶ ಸದುಪಯೋಗಪಡಿಸಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 20:13 IST
Last Updated 8 ಮಾರ್ಚ್ 2014, 20:13 IST

ಬೆಂಗಳೂರು: ‘ಇತರರಿಗೆ ಮಾದರಿಯಾಗುವ ರೀತಿಯಲ್ಲಿ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು’ ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಕಿವಿಮಾತು ಹೇಳಿದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಮತ್ತು ಕಾಲೇಜಿನ ಹಳೆಯ ವಿದ್ಯಾರ್ಥಿನಿಯರ ಸಂಘದ ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಅಂತರ­ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾನು 1964ರಲ್ಲಿ ಇದೇ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದೆ. ಆದರೆ, ಕಲಾವಿದೆಯಾಗುತ್ತೇನೆ  ಎಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು‘ ಎಂದರು.
ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿನಿಯರ ಸಂಘದ ವೆಬ್‌ಸೈಟ್‌ ಅನ್ನು ಬಿಡುಗಡೆ ಮಾಡಲಾಯಿತು. ವೆಬ್‌ಸೈಟ್‌: www.mscwba.in

ಕಾಲೇಜಿನ ಪ್ರಾಂಶುಪಾಲೆ ಪ್ರೊ.ಬಿ.ಲಲಿತಮ್ಮ, ಸಂಘದ ಅಧ್ಯಕ್ಷ ಡಾ.ಮಧುರಾ ಛತ್ರಪತಿ, ಕಾರ್ಯಕ್ರಮದ ಸಂಯೋಜಕಿ ಡಾ.ಹೇಮಲತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.