ಬೆಂಗಳೂರು: ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳ ಮೂಲಕ ಈ ವರ್ಷ ಒಂದು ಲಕ್ಷ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಅರುಣ್ ಶಹಾಪುರ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ಕೆಲವು ಕಡೆಗಳಲ್ಲಿ ಪ್ರಾಧಿಕಾರದ ಅಧಿಕಾರಿಗಳು ರಿಯಲ್ ಎಸ್ಟೇಟ್ ಏಜೆಂಟ್‌ಗಳಿಗೆ ಸಹಕರಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದಕ್ಕೆ ಕಡಿವಾಣ ಹಾಕಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.