ADVERTISEMENT

‘ಕ್ರಿಸ್ತು ಜಯಂತಿ ಕಾಲೇಜಿಗೆ ಸ್ವಾಯತ್ತತೆ’

​ಪ್ರಜಾವಾಣಿ ವಾರ್ತೆ
Published 4 ಮೇ 2015, 10:57 IST
Last Updated 4 ಮೇ 2015, 10:57 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿದ್ದ ಕ್ರಿಸ್ತು ಜಯಂತಿ ಕಾಲೇಜಿಗೆ ಈಚೆಗೆ ಸ್ವಾಯತ್ತತೆ ದೊರಕಿದೆ. ಸ್ವಾಯತ್ತತೆ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ, ‘21ನೇ ಶತಮಾನವು ಬುದ್ದಿವಂತಿಕೆ ಹಾಗೂ ಆಸಕ್ತಿಯನ್ನು ಹೊಂದಿರುವವರಿಗೆ ಮಾತ್ರ ಮಾನ್ಯತೆ ನೀಡುತ್ತಿದೆ’ ಎಂದು ತಿಳಿಸಿದರು.

‘ವಿದ್ಯಾರ್ಥಿ ಜೀವನವನ್ನು ಒಂದು ಸವಾಲಾಗಿ ಪರಿಗಣಿಸಿ, ಶಿಸ್ತು ಹಾಗೂ ದೃಢತೆಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಕ್ರೈಸ್ಟ್ ಕಾಲೇಜಿನ ಪ್ರಾಂಶುಪಾಲ ಥಾಮಸ್ ಐಕರ್, ‘ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ಉತ್ತಮ ಸಂಬಂಧವಿದ್ದಾಗ  ಮಾತ್ರ ಪ್ರಗತಿ  ಸಾಧ್ಯ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.