ADVERTISEMENT

‘ಜವಾಬ್ದಾರಿಯಿಂದ ಚುನಾವಣಾ ಕಾರ್ಯ ನಿರ್ವಹಿಸಿ’

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2014, 19:52 IST
Last Updated 14 ಮಾರ್ಚ್ 2014, 19:52 IST

ಬೆಂಗಳೂರು: ‘ಲೋಕಸಭೆ ಚುನಾವಣೆಗೆ ನಿಯೋಜಿತವಾಗಿರುವ ನೋಡಲ್‌ ಅಧಿಕಾರಿಗಳು ಜವಾಬ್ದಾರಿಯುತವಾಗಿ ಚುನಾವಣಾ ಕಾರ್ಯನಿರ್ವಹಿಸಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವಿ.ಶಂಕರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ  ಶುಕ್ರ ವಾರ ನಡೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯದ ಮುಖ್ಯ ಚುನಾವಣಾಧಿ ಕಾರಿಗಳು ನೀಡಿರುವ ಮಾರ್ಗದರ್ಶನ ದಂತೆ ಪ್ರತಿಯೊಬ್ಬ ಅಧಿಕಾರಿಯು ಮುಕ್ತ ಹಾಗೂ ಪಾರದರ್ಶಕವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಅವರು ಹೇಳಿದರು.

‘ಮತದಾರರು ಮತದಾರರ ಪಟ್ಟಿ ಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.   ಮಾರ್ಚ್ ೧೬ರವರೆಗೆ ಹೆಸರುಗಳನ್ನು
ನೋಂದಾಯಿಸಿಕೊಳ್ಳಲು ಅವಕಾಶವಿದೆ.   ಸಂಬಂಧಪಟ್ಟ ಅಧಿಕಾರಿಗಳು ಮತದಾರ ರಿಗೆ ಈ ಸಂಬಂಧ ಅರಿವು ಮೂಡಿಸ ಬೇಕು’ ಎಂದು ತಿಳಿಸಿದರು.
ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ
ಟೋಲ್ ಫ್ರೀ ಸಂಖ್ಯೆ: ೧೦೭೭   ಕರೆ ಮಾಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.