ಬೆಂಗಳೂರು: ‘ರಕ್ತಗತವಾಗಿ ಭಾರತೀಯರು ಮಾನವೀಯತೆಯ ಮೂರ್ತಿಗಳು. ಹೀಗಿದ್ದೂ, ವಿಶ್ವವಿದ್ಯಾಲಯ, ರಾಜಕೀಯ ಕ್ಷೇತ್ರಗಳಲ್ಲಿ ಜಾತಿ ಹಾಗೂ ಮತವೆಂಬುದು ವಿಷವರ್ತುಲವಾಗಿ ರೂಪುಗೊಂಡಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತಿದೆ’ ಎಂದು ಶಾಸಕ ಕೆ.ಆರ್.ರಮೇಶ್‌ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಸಕ್ತ ಶೈಕ್ಷಣಿಕ ಸ್ಥಿತಿಗತಿ: ವಿದ್ಯಾರ್ಥಿ ಯುವಜನತೆಯ ಸಮಸ್ಯೆ ಪರಿಹಾರ– ಒಂದು ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಕಾನೂನು ಶಾಲೆ ಸಂಶೋಧಕ ಡಾ.ಚಂದ್ರಶೇಖರ ಐಜೂರು, ‘ಹಿಂದುಳಿದ, ದಲಿತ ಹಾಗೂ ಮುಸ್ಲಿಂ ವಸತಿನಿಲಯಗಳಲ್ಲಿ ಈ ಜನಾಂಗದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿಯೇ ಪ್ರತ್ಯೇಕತೆ ಹುಟ್ಟುಹಾಕಲಾಗುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.