ADVERTISEMENT

‘ಜಿಎಸ್‌ಎಸ್‌ ಹಾದಿ ಕ್ರಮಿಸಲು ಸಾಧ್ಯವಾಗಿಲ್ಲ’

​ಪ್ರಜಾವಾಣಿ ವಾರ್ತೆ
Published 10 ಜನವರಿ 2014, 19:53 IST
Last Updated 10 ಜನವರಿ 2014, 19:53 IST

ಬೆಂಗಳೂರು:  ‘ವಿಶ್ವವಿದ್ಯಾಲಯ­ಗಳಲ್ಲಿ­ರುವ  ಕನ್ನಡ ಅಧ್ಯಯನ ಕೇಂದ್ರಗಳು ಕೇವಲ ಹೆಸರಿಗಷ್ಟೇ ಅಸ್ತಿತ್ವದಲ್ಲಿದ್ದು, ಜಿ.ಎಸ್.ಶಿವರುದ್ರಪ್ಪ ಹಾಕಿಕೊಟ್ಟ ಹಾದಿಯನ್ನು ಕ್ರಮಿಸಲು ಯಾರಿಗೂ ಸಾಧ್ಯವಾಗುತ್ತಿಲ್ಲ’ ಎಂದು ವಿಮರ್ಶಕ ಓ.ಎಲ್. ನಾಗಭೂಷಣಸ್ವಾಮಿ ಅಭಿಪ್ರಾಯಪಟ್ಟರು.

ಸಾಹಿತ್ಯ ಅಕಾಡೆಮಿಯು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಕ್ಷ್ಯ ಚಿತ್ರೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ಸಾಕ್ಷ್ಯಚಿತ್ರೋತ್ಸವಕ್ಕೆ ಸಂತಸ­ವ್ಯಕ್ತಪಡಿಸಿದರು.

ಚಲನಚಿತ್ರ ನಿರ್ದೇಶಕ ಎನ್.ಎಸ್. ಶಂಕರ ಅವರೂ ಮಾತನಾಡಿದರು.

ಕುವೆಂಪು ಹಾಗೂ ಜಿ.ಎಸ್. ಶಿವರುದ್ರಪ್ಪ ಕುರಿತ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.