
ಬೆಂಗಳೂರು: ‘ಟಿಪ್ಪು ಸುಲ್ತಾನ್ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಆದಷ್ಟು ಬೇಗ ಜಮೀನು ಮಂಜೂರು ಮಾಡಬೇಕು’ ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಹೇಳಿದರು.
ಟಿಪ್ಪು ಸುಲ್ತಾನ್ ಸಂಯುಕ್ತ ರಂಗ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಅವರ 215ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಟಿಪ್ಪು ಸುಲ್ತಾನ್ ವಿವಿಗೆ ಜಮೀನು ನೀಡಲು ಸರ್ಕಾರ ವಿಳಂಬ ಮಾಡುತ್ತಿದೆ. ನಿಯೋಗದಲ್ಲಿ ತೆರಳಿ ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಮಾತು-ಕತೆ ನಡೆಸುವುದು ಅಗತ್ಯ’ ಎಂದರು.
ಇದೇ ಸಂದರ್ಭದಲ್ಲಿ ಚಾಮರಾಜಪೇಟೆಯ ಟಿಪ್ಪು ಬೇಸಿಗೆ ಅರಮನೆಯಿಂದ ಶ್ರೀರಂಗಪಟ್ಟಣದಲ್ಲಿರುವ ಟಿಪ್ಪು ಸಮಾಧಿವರೆಗೆ ಹೊರಟ ಹುತಾತ್ಮ ಯಾತ್ರೆಗೆ ಲೇಖಕ ತಲಕಾಡು ಚಿಕ್ಕರಂಗೇಗೌಡ ಚಾಲನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.