ADVERTISEMENT

‘ಧೂಮಪಾನ ಮಾಡದಂತೆ ಜಾಗೃತಿ ಅಗತ್ಯ’

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2014, 20:32 IST
Last Updated 12 ಮಾರ್ಚ್ 2014, 20:32 IST

ಬೆಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಜನರಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ’ ಎಂದು ಹಿರಿಯ ವೈದ್ಯ ಡಾ.ಉಪೇಂದ್ರ ಭೋಜಾನಿ ಹೇಳಿದರು.

ಇನ್‌ಸ್ಟಿಟ್ಯೂಟ್‌ ಆಫ್‌ ಪಬ್ಲಿಕ್‌ ಹೆಲ್ತ್‌ ಸಂಸ್ಥೆ (ಐಪಿಎಚ್) ವತಿಯಿಂದ ನಗರದಲ್ಲಿ ಬುಧವಾರ ನಡೆದ ವಿಶ್ವ ಧೂಮಪಾನ ರಹಿತ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಸರ್ಕಾರ ನಿಷೇಧಿಸಿದೆ. ಆದರೆ, ಈ ನಿಯಮ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಈ ನಿಯಮ ಉಲ್ಲಂಘನೆಯಾಗುತ್ತಿದೆ. ಧೂಮಪಾನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

ಆರೋಗ್ಯ ಕಾರ್ಯಕರ್ತ ಮೋಹನ್‌ರಾಜ್ ಮಾತನಾಡಿ, ‘ವಿಮಾನನಿಲ್ದಾಣದ ಅಧಿಕಾರಿಗಳು ಸಾರ್ವಜನಿಕರ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ವಿಮಾನ ನಿಲ್ದಾಣದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ಈ ಬಗ್ಗೆ ಬರೆದಿರುವ ಪತ್ರಕ್ಕೆ ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.