ಯಲಹಂಕ: ‘ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ಋಣ ತೀರಿಸಬೇಕೆಂಬ ಮನಸ್ಸಿದ್ದು, ಈ ದಿಸೆಯಲ್ಲಿ ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವುದೂ ನಮ್ಮೆಲ್ಲರ ಋಣವಾಗಿರಬೇಕು. ಇಲ್ಲದಿದ್ದರೆ ನಮ್ಮ ತಾಯಿಗೆ ದ್ರೋಹ ಬಗೆದಂತಾಗುತ್ತದೆ’ ಎಂದು ನಿರ್ದೇಶಕ ಪಿ.ಶೇಷಾದ್ರಿ ಹೇಳಿದರು.
ಹೆಬ್ಬಾಳ ಕೆಂಪಾಪುರದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದ ಪ್ರತಿಭಾನ ಕನ್ನಡ ಸಂಘದ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ‘ನಿಮ್ಮ ಬದುಕಿನಲ್ಲಿ ಎದುರಾಗುವ ಅವಮಾನ ಮತ್ತು ಕಷ್ಟಗಳನ್ನು ಸ್ವಾಗತಿಸಿದರೆ, ಭವಿಷ್ಯದಲ್ಲಿ ಅವು ಒಬ್ಬ ಮನುಷ್ಯನನ್ನು ಗಟ್ಟಿಗೊಳಿಸುತ್ತಾ ಹೋಗುತ್ತವೆ’ ಎಂದು ಸಲಹೆ ನೀಡಿದರು.
ಚಿಂತನೆ ಮತ್ತು ಪ್ರಶ್ನೆಮಾಡುವ ಗುಣಗಳನ್ನು ಬೆಳೆಸಿಕೊಳ್ಳುವುದರಿಂದ ಬೇರೆಬೇರೆ ಸಾಧ್ಯತೆಗಳು ಹಾಗೂ ಮಗ್ಗುಲುಗಳ ಬಗ್ಗೆ ಹೊಳೆಯುತ್ತಾ ಹೋಗುತ್ತದೆ. ವಿದ್ಯಾರ್ಥಿಗಳು ಅಂತಹ ಗುಣಗಳನ್ನು ರೂಪಿಸಿಕೊಳ್ಳ ಬೇಕು ಎಂದರು. ಕವಿಗೋಷ್ಠಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.