ನೆಲಮಂಗಲ: ‘ಮಧ್ಯರಾತ್ರಿವರೆಗೂ ಬಾರ್ ಮತ್ತು ರೆಸ್ಟೊರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅಭಿಪ್ರಾಯಪಟ್ಟರು.
ಇಲ್ಲಿಗೆ ಸಮೀಪದ ಹಂಚಿಪುರದಲ್ಲಿ ಚಾಮುಂಡೇಶ್ವರಿ ಸ್ಪೋರ್ಟ್ಸ್ ಕ್ಲಬ್ ಏರ್ಪಡಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ₨25,555 ನಗದು ಮತ್ತು ಟ್ರೋಫಿ ವಿತರಿಸಿ ಮಾತನಾಡಿದರು.
‘ತಡರಾತ್ರಿವರೆಗೆ ಬಾರ್‌ಗಳು ತೆರೆಯುವುದರಿಂದ ಎಟಿಎಂ ಕಳ್ಳತನ, ಸರಗಳವು ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚುತ್ತವೆ. ಅವುಗಳನ್ನು ನಿಯಂತ್ರಿಸಲು ಪೊಲೀಸರು ಮತ್ತು ಬಾರ್ ಕಾರ್ಮಿಕರಿಗೆ ಕಷ್ಟ’ ಎಂದರು.
ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಸಚ್ಚಿದಾನಂದಮೂರ್ತಿ ವಿವಿಧ ಬಹುಮಾನಗಳನ್ನು ವಿತರಿಸಿದರು. ಗ್ರಾ. ಪಂ. ಅಧ್ಯಕ್ಷ ಸುರೇಶ್, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಸಂಪತ್, ಮಾಜಿ ಅಧ್ಯಕ್ಷ ಬೈರೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.