ADVERTISEMENT

‘ಮಾನವ ಹಕ್ಕುಗಳ ರಕ್ಷಣೆ: ಸಾರ್ವಜನಿಕರ ಪಾತ್ರ ಮುಖ್ಯ’

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 19:35 IST
Last Updated 10 ಡಿಸೆಂಬರ್ 2013, 19:35 IST

ಹೊಸಕೋಟೆ: ಮಾನವ ಹಕ್ಕುಗಳ ರಕ್ಷಣೆಯಲ್ಲಿ ಸಾರ್ವಜನಿಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಜಿ.ಪಂ.ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದಲ್ಲಿ ಶೋಷಿತರ ಪರ ನಿಲ್ಲುವ ಮೂಲಕ ಮಾನವ ಹಕ್ಕುಗಳನ್ನು ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಗ್ರಾಮಾಂತರ ಪ್ರದೇಶದಲ್ಲಿನ ಸಾಮಾನ್ಯ ಜನರಿಗೂ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವಿ.ಶಂಕರ್ ಮಾತನಾಡಿ ಹಕ್ಕುಗಳ ರಕ್ಷಣೆ ಮಾಡುವಲ್ಲಿ ಸರ್ಕಾರ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.