ADVERTISEMENT

‘ವಿದ್ಯಾರ್ಥಿಗಳ ಅಂತರ್ಜಾಲ ಪ್ರಪಂಚ’ಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 19:32 IST
Last Updated 12 ಡಿಸೆಂಬರ್ 2013, 19:32 IST

ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಅಂತ­ರ್ಜಾಲದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಆವಲಹಳ್ಳಿ ಸಮೀಪದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಇತ್ತೀಚೆಗೆ ‘ವಿದ್ಯಾರ್ಥಿಗಳ ಅಂತರ್ಜಾಲ ಪ್ರಪಂಚ– 2013’ ಕಾರ್ಯಕ್ರಮ ಆಯೋಜಿಸಿತ್ತು.

ಕಾಲೇಜಿನ ಮುಖ್ಯ ಕಾರ್ಯ­ನಿರ್ವಾಹ­ಣಾಧಿಕಾರಿ ಪ್ರಮೋದ್‌ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜಿನಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಮೊದಲ ದಿನ ಹೊಸಕೋಟೆ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅಂತರ್ಜಾಲದ ಬಗ್ಗೆ ಮಾಹಿತಿ ನೀಡಲಾಯಿತು.

‘ಕಳೆದ ಐದು ವರ್ಷಗಳಿಂದ ಶಿಕ್ಷಣ ಇಲಾಖೆ ನಡೆಸಿಕೊಂಡು ಬರುತ್ತಿರುವ ಈ ಅಭಿಯಾನದಿಂದ ಗ್ರಾಮಾಂತರ ಪ್ರದೇಶದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ಅಂತರ್ಜಾಲದ ಬಗ್ಗೆ ತಿಳಿದು­ಕೊಳ್ಳಲು ಸಹಾಯವಾಗಿದೆ. ವಿದ್ಯಾರ್ಥಿ­ಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕು’ ಎಂದು ಪ್ರಮೋದ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ವಿಭಾ­ಗದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಅಂತರ್ಜಾಲದ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.