ADVERTISEMENT

‘ವಿವೇಕಾನಂದರ ಆದರ್ಶ ಪಾಲಿಸಿ’

​ಪ್ರಜಾವಾಣಿ ವಾರ್ತೆ
Published 16 ಜನವರಿ 2016, 19:40 IST
Last Updated 16 ಜನವರಿ 2016, 19:40 IST
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂ.ನಾರಾಯಣಸ್ವಾಮಿ ಪ್ರೋತ್ಸಾಹ ಧನದ ಚೆಕ್‌ಗಳನ್ನು ವಿತರಿಸಿದರು. ಕೆಂಪರಾಜು, ಎ.ಶ್ರೀನಿವಾಸ್‌, ದೊಡ್ಡಮುನಿಯಪ್ಪ, ಎ.ಸಿ.ಹರಿಪ್ರಸಾದ್‌ ಇದ್ದಾರೆ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂ.ನಾರಾಯಣಸ್ವಾಮಿ ಪ್ರೋತ್ಸಾಹ ಧನದ ಚೆಕ್‌ಗಳನ್ನು ವಿತರಿಸಿದರು. ಕೆಂಪರಾಜು, ಎ.ಶ್ರೀನಿವಾಸ್‌, ದೊಡ್ಡಮುನಿಯಪ್ಪ, ಎ.ಸಿ.ಹರಿಪ್ರಸಾದ್‌ ಇದ್ದಾರೆ   

ಬೆಂಗಳೂರು: ‘ಯುವ ಜನರು ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಎಂ. ನಾರಾಯಣಸ್ವಾಮಿ ಹೇಳಿದರು.

ಸ್ವಾಮಿ ವಿವೇಕಾನಂದ ಫೌಂಡೇಷನ್‌ ಮಹದೇವಪುರ ಕ್ಷೇತ್ರದ ಹಂಚರಹಳ್ಳಿಯಲ್ಲಿ ಆಯೋಜಿಸಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಚೆಕ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

‘ದೇಶ ಸದೃಢವಾಗಿ ಬೆಳೆಯಬೇಕಾದರೆ ಯುವಕರ ಪಾತ್ರ ಮುಖ್ಯವಾಗಿದೆ. ಯುವಪೀಳಿಗೆ ಸನ್ಮಾರ್ಗದಲ್ಲಿ ನಡೆಯಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು’ ಎಂದು ಕಿವಿಮಾತು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಕೆಂಪರಾಜು ಮಾತನಾಡಿ, ‘ಸ್ಥಳೀಯ ಯುವಕರು ಸ್ವಾಮಿ ವಿವೇಕಾನಂದ ಫೌಂಡೇಷನ್‌ ಸ್ಥಾಪಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ’ ಎಂದರು. ಇದೇ ವೇಳೆ ಬಡ ಮಹಿಳೆಯರಿಗೆ ಸೀರೆ, ವೃದ್ಧರಿಗೆ ಕಂಬಳಿ, ಹಾಸಿಗೆ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.