ಬೆಂಗಳೂರು: ‘ಒಂದು ಸಂಸ್ಥೆ ಅಥವಾ ದೇಶ ಸಮಗ್ರ ಪ್ರಗತಿ ಸಾಧಿಸಲು ಪ್ರತಿಯೊಂದು ಯೋಜನೆ ಕುರಿತು ಆಳವಾದ ಸಂಶೋಧನೆ ನಡೆಸಬೇಕು. ಸಂಶೋಧನೆಗಳಿಂದ ಸರಿಯಾದ ಯೋಜನೆ ರೂಪುಗೊಳ್ಳುತ್ತದೆ. ಇದರಿಂದ ದೇಶದ ಆರ್ಥಿಕತೆ ಉತ್ತಮವಾಗುವುದರ ಜತೆಗೆ ಶಿಕ್ಷಣಕ್ಕೂ ಅನುಕೂಲವಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಆರ್. ದೊರೆಸ್ವಾಮಿ ಅಭಿಪ್ರಾಯಪಟ್ಟರು.
ನಗರದ ಶ್ರೀಕೃಷ್ಣ ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಸುಸ್ಥಿರ ಜಾಗತಿಕ ಆರ್ಥಿಕ ಸ್ಥಿತಿ ಗಳಿಕೆ’ ಕುರಿತ ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
‘ಬೆಂಗಳೂರು ವಿವಿ ಅಡಿಯಲ್ಲಿ 600 ಕಾಲೇಜುಗಳು ಇವೆ. ಇಷ್ಟು ದೊಡ್ಡ ಸಂಖ್ಯೆಯ ಕಾಲೇಜುಗಳನ್ನು ನಿರ್ವಹಿಸುವುದು ದೊಡ್ಡ ಹೊರೆ. ಜತೆಗೆ ವಿದ್ಯಾರ್ಥಿಗಳಿಗೆ ತಲುಪಬೇಕಾದ ಯೋಜನೆಗಳು ಸಮರ್ಪಕವಾಗಿ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ದೊಡ್ಡ ವಿಶ್ವವಿದ್ಯಾಲಯಗಳನ್ನು ವಿಭಾಗಿಸಿ ಪ್ರತ್ಯೇಕ ಮಾಡುವ ಅಗತ್ಯವಿದೆ’ ಎಂದರು.
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಮಾತನಾಡಿ, ‘ಕಾಲೇಜುಗಳು ನಿರಂತರವಾಗಿ ವಿಚಾರಸಂಕಿರಣಗಳನ್ನು ಆಯೋಜಿಸಬೇಕು’ ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.