ಪೀಣ್ಯ ದಾಸರಹಳ್ಳಿ: ‘ಸುತ್ತಮುತ್ತಲಿನ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಆಧುನಿಕತೆಯ ತಂತ್ರಜ್ಞಾನವನ್ನು ಬಳಸಿ ಹೋರಾಟ ರೂಪಿಸಬೇಕು’ ಎಂದು ಡಾ.ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಸಮಿತಿ ಟ್ರಸ್ಟ್ ಅಧ್ಯಕ್ಷ ಎಸ್.ಮರಿಸ್ವಾಮಿ ಸಲಹೆ ನೀಡಿದರು.
ಮಾಗಡಿ ರಸ್ತೆಯ ಸ್ಫೂರ್ತಿಧಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಶನಿವಾರ ಆಯೋಜಿಸಿದ್ದ ದಲಿತ ಚಳುವಳಿ ಅವಲೋಕನ ಶಿಬಿರದಲ್ಲಿ ಅವರು ಮಾತನಾಡಿದರು.
‘ಚಳವಳಿ, ಹೋರಾಟಗಳಲ್ಲಿ ಭಾಗವಹಿಸಲಾಗದವರು ಇರುವ ಸ್ಥಳಗಳಿಂದ ತಂತ್ರಜ್ಞಾನದ ನೆರವಿನಿಂದ ಬೆಂಬಲ ಸೂಚಿಸುವುದರಿಂದ ಹೋರಾಟಗಳಿಗೆ ಬಲ ಬಂದಂತಾಗುತ್ತದೆ’ ಎಂದರು.
ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಬೆಂಗಳೂರು ವಿ.ವಿ ಪ್ರಾಧ್ಯಾಪಕ ನಟರಾಜ್ ಹುಳಿಯಾರ್, ಸಮಿತಿಯ ಮಹಿಳಾ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕಿ ಇಂದಿರಾ ಕೃಷ್ಣಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.