ADVERTISEMENT

ಬೆಂಗಳೂರು | ಮುಖಗವಸು ಧರಿಸದಿದ್ದರೆ ₹1000 ದಂಡ !

​ಪ್ರಜಾವಾಣಿ ವಾರ್ತೆ
Published 1 ಮೇ 2020, 22:31 IST
Last Updated 1 ಮೇ 2020, 22:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೊರೊನಾ ಸೋಂಕು ಹರಡದಂತೆ ತಡೆಯಲು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿರುವ ಬಿಬಿಎಂಪಿ, ಹೊರಗೆ ಸಂಚರಿಸುವಾಗ ಮುಖಗವಸು ಧರಿಸುವುದನ್ನು ಕಡ್ಡಾಯ ಮಾಡಿದ್ದು, ಈ ನಿಯಮ ಉಲ್ಲಂಘಿಸಿದವರಿಗೆ ₹1,000ದಿಂದ ₹2,000ದವರೆಗೆ ದಂಡ ವಿಧಿಸಲಿದೆ.

ಈ ನಿಯಮವನ್ನು ಮೊದಲ ಬಾರಿಗೆ ಉಲ್ಲಂಘಿಸಿದರೆ ₹1,000 ಮತ್ತು ಎರಡನೇ ಬಾರಿ ಉಲ್ಲಂಘಿಸಿದರೆ ₹2,000 ದಂಡ ವಿಧಿಸಲಾಗುತ್ತದೆ. ಬಳಸಿದ ಮುಖಗವಸುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ (ನಾಶ) ಮಾಡಬೇಕು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್‌ ಆದೇಶಿಸಿದ್ದಾರೆ.

‘ಐದು ಅಥವಾ ಅದಕ್ಕಿಂತ ಹೆಚ್ಚು ಜನ ಸೇರಿರುವ ಸಾರ್ವಜನಿಕ ಸ್ಥಳ ಹಾಗೂ ಕಚೇರಿಗಳಲ್ಲಿ ಬಾಯಿ ಮತ್ತು ಮೂಗು ಮುಚ್ಚುವಂತಹ ಮಾಸ್ಕ್‌ ಧರಿಸುವುದು ಕಡ್ಡಾಯ. ಮನೆ ಅಥವಾ ಕಚೇರಿಯಲ್ಲಿ ಯಾರೇ ಬಳಸಿರುವ ಮುಖ ಮತ್ತು ಕೈಗವಸುಗಳನ್ನು ಮುಚ್ಚಿದ ಕವರ್‌ನಲ್ಲಿ ಕಸ ಸಂಗ್ರಹಿಸುವವರಿಗೆ ಕೊಡಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.