ADVERTISEMENT

10 ಸಾವಿರ ಟನ್‌ ಕಸ ಸ್ಥಳಾಂತರಕ್ಕೆ ಆದೇಶ

​ಪ್ರಜಾವಾಣಿ ವಾರ್ತೆ
Published 28 ಮೇ 2018, 19:30 IST
Last Updated 28 ಮೇ 2018, 19:30 IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಗ್ರಹಿಸಿರುವ 10 ಸಾವಿರ ಟನ್ ಕಸ ಕೂಡಲೇ ಬೇರೆಡೆಗೆ ಸ್ಥಳಾಂತರಿಸುವಂತೆ ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮದ (ಕೆಸಿಡಿಸಿ) ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಕೂಡ್ಲುಗೇಟ್ ಬಳಿಯ ಕೆಸಿಡಿಸಿ ಘಟಕವನ್ನು ಮುಚ್ಚುವಂತೆ ಸ್ಥಳೀಯರು ಸಲ್ಲಿಸಿದ್ದ ಮನವಿ ಪರಿಗಣಿಸಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಕುರಿತು ಆದೇಶಿಸಿದೆ.

ನೂರು ‘ಸ್ಮಾರ್ಟ್ ‌ಬಿನ್’ ಕಸದ ಡಬ್ಬಿಗಳ ನಿರ್ವಹಣೆ ಕುರಿತಂತೆ ವರದಿ ಸಲ್ಲಿಸುವಂತೆಯೂ ಆದೇಶಿಸಲಾಗಿದೆ.

ADVERTISEMENT

ಬಿಬಿಎಂಪಿ ಪರ ಹಾಜರಿದ್ದ ವಕೀಲ ಕೆ.ಎನ್.ಪುಟ್ಟೇಗೌಡ, ವಾರ್ಡ್ ಸಮಿತಿ ಸಭೆ ನಡೆಸದೇ ಇದ್ದ ವಾರ್ಡ್‌ಗಳ ಕುರಿತು ವರದಿ ಸಲ್ಲಿಸಿದರು. '34 ವಾರ್ಡ್‌ಗಳಲ್ಲಿ ಸಭೆ ನಡೆಸಲಾಗಿದೆ. ವಾರ್ಡ್ 38ರಲ್ಲಿ ಸಮಿತಿ ಸಭೆ ನಡೆಸಿಲ್ಲ' ಎಂದು ಮಾಹಿತಿ ನೀಡಿದರು. 2 ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ, ಜೂನ್ 28ಕ್ಕೆ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.